ಪತ್ನಿ, ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೇರಳದ ಮಲ್ಲಪುರಂನಲ್ಲಿ ಓರ್ವ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಬೆಂಕಿ ಹಚ್ಚಿ ಕೊಂದು, ಬಳಿಕ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಅಮಾನವೀಯ ಘಟನೆ ನಡೆದಿದೆ.
ಕೊಂಡಿಪರಂಬ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಮೊಹಮ್ಮದ್​ ಎಂಬ ವ್ಯಕ್ತಿ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಕರೆದುಕೊಂಡು ಹೋಗಿದ್ದಾನೆ.ಬಳಿಕ ಅವರಿಗೆ ಬೆಂಕಿ ಹೆಚ್ಚಿ ಕೊಂದಿದ್ದಾನೆ. ನಂತರ ಆತನೂ ಬೆಂಕಿ ಹಚ್ಚಿಕೊಂಡು ಸಮೀಪದಲ್ಲೇ ಇದ್ದ ಬಾವಿಗೆ ಹಾರಿ ಆಸತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಮೊಹಮ್ಮದ್​, ಆತನ ಪತ್ನಿ ಹಾಗೂ 11 ವರ್ಷದ ಬಾಲಕಿ ಸುಟ್ಟು ಕರಕಲಾಗಿದ್ದಾರೆ. ಮತ್ತೋರ್ವ ಐದು ವರ್ಷದ ಬಾಲಕಿಗೆ ಗಂಭೀರವಾದ ಸುಟ್ಟಗಾಯಗಳಾಗಿದ್ದು, ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಬಾಲಕಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.
ಮೃತ ಮೊಹಮ್ಮದ್​​ ಯಾವ ಕಾರಣಕ್ಕೆ ಕೊಲೆ ಮಾಡಿದ ಎಂಬುದರ ಕುರಿತಂತೆ ಮಾಹಿತಿ ಲಭ್ಯವಾಗಿಲ್ಲ. ಇನ್ನು ಎಲ್ಲಾ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!