ಹೊಸದಿಗಂತ ಡಿಜಿಟಲ್ ಡೆಸ್ಕ್, ಮಡಿಕೇರಿ
ವ್ಯಕ್ತಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವೀರಾಜಪೇಟೆ ತಾಲೂಕಿನ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ.
ಕೆದಮುಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಾಲಂಗಾಲ ನಿವಾಸಿ ಕರಿನೆರವಂಡ ಡಿ.ಅಯ್ಯಪ್ಪ ಎಂಬವರೇ ಸಾವಿಗೆ ಶರಣಾದ ವ್ಯಕ್ತಿ.
ಅನಾರೋಗ್ಯವೇ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗುತ್ತಿದ್ದು, ಒಂಟಿ ನಳಿಕೆಯ ಕೋವಿಯಿಂದ ಎದೆ ಭಾಗಕ್ಕೆ ಗುಂಡು ಹೊಡೆದುಕೊಂಡಿರುವುದು ಕಂಡು ಬಂದಿದೆ.
ಮೃತರ ಪತ್ನಿ ಕಮಲಾ ಅವರು ನೀಡಿದ ದೂರಿನ ಮೇರೆಗೆ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.