July 14, 2026
Tuesday, July 14, 2026
spot_img

ಬೆಳಗಾವಿಯ ಎಪಿಎಂಸಿ ಮಾರುಕಟ್ಟೆಯಲ್ಲಿ ಆತ್ಮ*ಹತ್ಯೆಗೆ ಶರಣಾದ ವ್ಯಕ್ತಿ, ಕಾರಣ ಏನು?

ಹೊಸದಿಗಂತ ವರದಿ ಬೆಳಗಾವಿ:

ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಭಾನುವಾರ ಬೆಳಿಗ್ಗೆ ಅಪರಿಚಿತ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಮೃತ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಮಾರುಕಟ್ಟೆ ಪ್ರದೇಶದಲ್ಲೇ ಖಾಲಿ ಬಾಟಲಿಗಳನ್ನು ಸಂಗ್ರಹಿಸಿ ಜೀವನ ಸಾಗಿಸುತ್ತಿದ್ದರು. ರಾತ್ರಿ ವೇಳೆಯಲ್ಲೂ ಇದೇ ಪ್ರದೇಶದಲ್ಲಿ ವಾಸ್ತವ್ಯ ಹೂಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಮಾರುಕಟ್ಟೆಯ ಮುಚ್ಚಿದ ಅಂಗಡಿಯೊಂದರ ಮುಂಭಾಗದಲ್ಲಿ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ತಿಳಿಸಿದ್ದಾರೆ.
ಮಾಹಿತಿ ನೀಡುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಆಗಮಿಸಿದ ಎಪಿಎಂಸಿ ಠಾಣೆಯ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿ. ಪ್ರಕರಣ ದಾಖಲಿಸಿಕೊಂಡಿರುವ ಈ ವ್ಯಕ್ತಿಯು ಆತ್ಮಹತ್ಯೆಗೆ ಕಾರಣವೇನು ಎಂಬುದರ ಕುರಿತು ತನಿಖೆ ಕೈಗೊಂಡಿದ್ದಾರೆ.

ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಅವರ ಗುರುತು ಹಾಗೂ ಹಿನ್ನೆಲೆಯ ಕುರಿತು ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಪೊಲೀಸರು ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !