ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ

ದಿಗಂತ ವರದಿ ವಿಜಯಪುರ:

ವ್ಯಕ್ತಿಯೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಇಬ್ರಾಹಿಂಪುರ ರೈಲ್ವೆ ಗೇಟ್ ಬಳಿ ಶನಿವಾರ ಬೆಳಗ್ಗೆ ನಡೆದಿದೆ. ಮೃತಪಟ್ಟವನನ್ನು ನಗರ ನಿವಾಸಿ ಗುರುರಾಜ ಪುರೋಹಿತ ಎಂದು ಗುರುತಿಸಲಾಗಿದೆ.

ಮೃತಪಟ್ಟಿರುವ ವ್ಯಕ್ತಿ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವುದು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ವಿಜಯಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!