ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಗಿ ವಿಂಡ್ಸರ್ ಮ್ಯಾನರ್ ಬ್ರಿಡ್ಜ್(Windsor Manor Bridge) ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಅಪರಿಚಿತ ವ್ಯಕ್ತಿ ಬ್ರಿಡ್ಜ್ ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ. ಕೂಡಲೇ ಪೊಲೀಸರು ವ್ಯಕ್ತಿಯನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಇದೀಗ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಚಲಿಸುತ್ತಿದ್ದ ರೈಲಿನಿಂದ ಬಿದ್ದನಾ? ಅಥವಾ ಆತ್ಮಹತ್ಯೆಗೆ ಯತ್ನಿಸಿದ್ದಾನಾ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಚಲಿಸುತ್ತಿದ್ದ ರೈಲಿನಿಂದ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಯುವತಿ ಚಲಾಯಿಸುತ್ತಿದ್ದ ಕಿಯಾ ಸಾನೆಟ್ ಕಾರು ಇದಾಗಿದ್ದು, ಸುಮಾರು 35 ರಿಂದ 40 ವರ್ಷದ ಆಸುಪಾಸಿನ ವ್ಯಕ್ತಿ ಎಂಬುದು ತಿಳಿದು ಬಂದಿದೆ. ಬಿದ್ದ ರಭಸಕ್ಕೆ ವ್ಯಕ್ತಿ ಮೃತಪಟ್ಟಿದ್ದಾನೆ. ಸದ್ಯ ಮೃತ ವ್ಯಕ್ತಿಯ ಹಿನ್ನೆಲೆಯನ್ನ ಪೊಲೀಸರು ಕಲೆಹಾಕುತ್ತಿದ್ದಾರೆ.