ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಮಹಾ ಕುಂಭಮೇಳಕ್ಕೆ ತೆರಳಿ, ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಸ್ನಾನ ಮಾಡುತ್ತಿದ್ದ ಸಂದರ್ಭ ತುಮಕೂರು ಜಿಲ್ಲೆಯ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬರಗೂರು ಮೂಲದ ನಾಗರಾಜ್(57) ಎಂಬುವರೇ ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದ ಸಂದರ್ಭ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ವ್ಯಕ್ತಿಯಾಗಿದ್ದಾರೆ.
ನಾಗರಾಜ್ ಸ್ನೇಹಿತರ ಜೊತೆಗೆ ಪ್ರಯಾಗ್ ರಾಜ್ ನ ಕುಂಭಮೇಳಕ್ಕೆ ತೆರಳಿದ್ದರು. ಮಂಗಳವಾರದ ಸಾಯಂಕಾಲ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಸಂಧ್ಯಾ ವಂದನೆಯ ಬಳಿಕ, ಪುಣ್ಯ ಸ್ನಾನ ಮಾಡುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ಆಸ್ಪತ್ರೆಗೆ ಸಾಗಿಸೋಕೂ ಮುನ್ನವೇ ಅವರು ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.