ದ್ವಿಚಕ್ರ ವಾಹನಕ್ಕೆ ನಾಯಿಯನ್ನು ಕಟ್ಟಿ ರಸ್ತೆಯುದ್ದಕ್ಕೂ ಎಳೆದೊಯ್ದ ವ್ಯಕ್ತಿ!

ಹೊಸ ದಿಗಂತ ವರದಿ,ಮಂಗಳೂರು:

ಸತ್ತ ನಾಯಿಯ ಶವವನ್ನು ತನ್ನ ದ್ವಿಚಕ್ರ ವಾಹನಕ್ಕೆ ಸರಪಳಿಯಿಂದ ಬಿಗಿದು ಶನಿವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಮುಖ್ಯ ರಸ್ತೆಯಲ್ಲಿ ಎಳೆದೊಯ್ದಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಉಡುಪಿ ಜಿಲ್ಲಾ ಪ್ರಾಣಿದಯಾ ಸಂಘದ ಸದಸ್ಯೆ ಮಂಜುಳಾ ಕರ್ಕೆರಾ ಎಂಬವರು ಶಿರ್ವ ಪೋಲಿಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಕಾಪುವಿನ ಕೊಂಬಗುಡ್ಡೆಯ ನಿವಾಸಿ ಖಾದರ್ ಎಂಬ ವ್ಯಕ್ತಿಯು ಸತ್ತ ನಾಯಿಯ ಕೊರಳಿಗೆ ಚೈನ್​ ಬಿಗಿದು ದ್ವಿಚಕ್ರ ವಾಹನಕ್ಕೆ ಕಟ್ಟಿ ರಸ್ತೆಯುದ್ದಕ್ಕೂ ಎಳೆದೊಯ್ದಿರುವ ವ್ಯಕ್ತಿ. ಕೊಂಬಗುಡ್ಡೆಯಿಂದ ಶಿರ್ವ ಪೇಟೆಯವರೆಗೆ ಸುಮಾರು 5 ಕಿ.ಮೀ ದೂರದವರೆಗೆ ಎಳೆದುಕೊಂಡು ಹೋಗಿದ್ದಾನೆ. ಶಿರ್ವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!