ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಸಂಸತ್ ಭವನದ ಬಳಿ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಗಾಯಾಳುವನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ.
ಇನ್ನು ಈ ವ್ಯಕ್ತಿಯ ಬಗ್ಗೆ ಹೆಚ್ಚಿನ ವಿವರಗಳು ಸಿಕ್ಕಿಲ್ಲ. ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಜತೆಗೆ ಆ ವ್ಯಕ್ತಿ ಸಂಸತ್ ಮುಂದೆ ಬಂದು ಬೆಂಕಿ ಹಚ್ಚಿಕೊಳ್ಳಲು ಕಾರಣ ಏನು ಎಂಬ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.
ಮೂಲಗಳ ಪ್ರಕಾರ, ಈ ವ್ಯಕ್ತಿ ಸಂಸತ್ತಿನ ಮುಂಭಾಗದಲ್ಲಿರುವ ಉದ್ಯಾನವನದಲ್ಲಿ ಬೆಂಕಿ ಹಚ್ಚಿಕೊಂಡು ನಂತರ ಸಂಸತ್ತಿನ ಮುಖ್ಯ ದ್ವಾರದ ಕಡೆಗೆ ಹೋಗಿದ್ದಾನೆ. ಈ ವ್ಯಕ್ತಿಯ ದೇಹದ 90 ರಷ್ಟು ಭಾಗ ಸುಟ್ಟ ಗಾಯಗಳಾಗಿವೆ. ತಕ್ಷಣ ಸಂಸತ್ತಿನ ಮುಂಭಾಗದಲ್ಲಿ ಪೊಲೀಸರು ಆತನನ್ನು ನಗರದ ಆರ್‌ಎಂಎಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈಗ ಆತನ ಸ್ಥಿತಿ ತುಂಬಾ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಟ್ರೋಲ್ ತರಹದ ವಸ್ತುವನ್ನು ಬಳಸಿಕೊಂಡ ಬೆಂಕಿ ಹಚ್ಚಿಕೊಂಡಿದ್ದಾನೆ.
ಇನ್ನು ಪೊಲೀಸರು ತನಿಖೆ ಶುರು ಮಾಡಿದ್ದು, ರೈಲ್ವೆ ಭವನ ಮತ್ತು ಸಂಸತ್ತಿನ ಹೊರಗಿನ ಸಿಸಿಟಿವಿ ದೃಶ್ಯಾವಳಿವನ್ನು ಪಡೆದುಕೊಂಡಿದ್ದಾರೆ.