Thursday, February 2, 2023

Latest Posts

ಭಾರತ್ ಜೋಡೋ ಯಾತ್ರೆಯಲ್ಲಿ ಭದ್ರತಾ ವೈಫಲ್ಯ: ರಾಹುಲ್ ಗಾಂಧಿಯತ್ತ ಧಾವಿಸಿ ಅಪ್ಪಿಕೊಂಡ ಯುವಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ರಾಹುಲ್ ಗಾಂಧಿಯನ್ನು ಅಪ್ಪಿಕೊಳ್ಳಲು ಪ್ರಯತ್ನಿಸುತ್ತಿರುವುದು ಕಂಡುಬಂದಿದ್ದು, ಭದ್ರತೆಯಲ್ಲಿ ಲೋಪ ಕಂಡುಬಂದಿದೆ. ಸ್ಥಳದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಆ ವ್ಯಕ್ತಿಯನ್ನು ತಳ್ಳಿದ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡುತ್ತಿದೆ.

ವಿಡಿಯೋದಲ್ಲಿ ಜಾಕೆಟ್ ಧರಿಸಿದ್ದ ವ್ಯಕ್ತಿಯೊಬ್ಬರು ರಾಹುಲ್ ಗಾಂಧಿಯವರ ಕಡೆಗೆ ಧಾವಿಸಿ ಅವರನ್ನು ಅಪ್ಪಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಆದರೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಮತ್ತು ಇತರ ಪಕ್ಷದ ಕಾರ್ಯಕರ್ತರು ಆತನನ್ನು ತಡೆದು ದೂರ ತಳ್ಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!