ಮನೆಯಿಂದ ಹೊರ ಹೋದವ ಹೆಣವಾಗಿ ಪತ್ತೆ, ಪೊಲೀಸರಿಂದ ತನಿಖೆ

ಹೊಸದಿಗಂತ ವರದಿ ಹುಬ್ಬಳ್ಳಿ:

ವ್ಯಕ್ತಿ ಒಬ್ಬನಿಗೆ ಬಡಿಗೆಯಿಂದ‌ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಿದ ಘಟನೆ ತಾಲೂಕಿ‌ನ ನೂಲ್ವಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಶಂಭು ಕಮಡೊಳ್ಳಿ (34 ) ಕೊಲೆಯಾದ ವ್ಯಕ್ತಿ. ಶುಕ್ರವಾರ ರಾತ್ರಿ ಮನೆಯಿಂದ ಹೋದವನು ಶನಿವಾರ ಬೆಳಗ್ಗೆ ಮನೆಯ ಸ್ವಲ್ಪ ದೂರದಲ್ಲಿ ಕೊಲೆಯಾಗಿ ಪತ್ತೆಯಾಗಿದ್ದಾನೆ.

ವಿಷಯ ತಿಳಿದ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಪಕ್ಕದಲ್ಲಿ ಶವ ಪತ್ತೆಯಾಗಿದ್ದರಿಂದ ಮತ್ತು ತಲೆಗೆ ಗಾಯಗಳಾಗಿದ್ದರಿಂದ ಹಲವಾರು ಅನುಮಾನಗಳು ಮೂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು‌ ನಗರದ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!