ದಿಗಂತ ವರದಿ ಕಲಬುರಗಿ:
ಹಳ್ಳದಲ್ಲಿ ಮೀನು ಸೆರೆ ಹಿಡಿಯಲು ಹೋದಂತಹ ವ್ಯಕ್ತಿ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಕುರಕುಂಟಾ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಸೇಡಂ ತಾಲೂಕಿನ ಕುರಕುಂಟಾ ಗ್ರಾಮದ ರಾಜು ನಾಮವರ್ (38) ಹಳ್ಳದಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿಯಾಗಿದ್ದು,ಸತತ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು,ಈ ನಡುವೆ ಮೀನುಗಳನ್ನು ಹಿಡಿಯಲು ಹೋದಾಗ ಈ ಅವಘಡ ಸಂಭವಿಸಿದೆ.
ಅಗ್ನಿಶಾಮಕ ದಳ ಹಾಗೂ ಸಿಬ್ಬಂದಿ ಮತ್ತು ಪೋಲಿಸರಿಂದ ಶೋಧ ಕಾರ್ಯ ನಡೆದಿದ್ದು,ಕುರಕುಂಟಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.