October 16, 2026
Friday, October 16, 2026
spot_img

ಅಪ್ರಾಪ್ತ ವಯಸ್ಕ ಬಾಲಕಿಯನ್ನು ನಂಬಿಸಿ ಮದುವೆಯಾಗಿದ್ದ ಕಾಮುಕನಿಗೆ 20 ವರ್ಷ ಜೈಲು, 40 ಸಾವಿರ ದಂಡ

ಹೊಸದಿಗಂತ ವರದಿ ದಾವಣಗೆರೆ:

ಅಪ್ರಾಪ್ತ ವಯಸ್ಕ ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 40 ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್.ಸಿ-1 ನ್ಯಾಯಾಲಯ ತೀರ್ಪು ನೀಡಿದೆ.

ಇಲ್ಲಿನ ಕೆಟಿಜೆ ನಗರದ ಪಿ.ಎಸ್.ಕಾರ್ತಿಕ್(22) ಶಿಕ್ಷೆಗೆ ಗುರಿಯಾದ ಅಪರಾಧಿ. ಅಪ್ರಾಪ್ತ ವಯಸ್ಸಿನ ತಮ್ಮ ಮಗಳು ಕಾಲೇಜಿಗೆ ಹೋದವಳು ಸಂಜೆಯಾದರೂ ವಾಪಸ್ಸಾಗದ ಕಾರಣ ಪೋಷಕರು 2022 ಮಾರ್ಚ್ 10ರಂದು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಂತರ ನ್ಯಾಯಾಲಯಕ್ಕೆ ದೋಷಾಪರಣಾ ಪಟ್ಟಿ ಸಲ್ಲಿಸಿದ್ದರು. ಪಿ.ಎಸ್.ರಾಕೇಶ್ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗುವುದಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಿ ದೇವಸ್ಥಾನದಲ್ಲಿ ಅರಿಶಿಣ ಕೊಂಬಿನ ದಾರ ಕಟ್ಟಿದ್ದ. ಬಾಡಿಗೆ ಮನೆ ಮಾಡಿಕೊಂಡು ಬಾಲಕಿಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿದ್ದು ತನಿಖೆಯಿಂದ ತಿಳಿದುಬಂದಿತ್ತು. 

ಇದನ್ನೂ ಓದಿ:

ವಿಚಾರಣೆ ನಂತರ ಆರೋಪ ಸಾಬೀತಾಗಿದ್ದರಿಂದ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ ಅಪರಾಧಿ ಪಿ.ಎಸ್.ರಾಕೇಶ್ ಗೆ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ದಂಡದ ಮೊತ್ತದ ಜೊತೆಗೆ ಪ್ರಕರಣದ ಸಂತ್ರಸ್ಥೆಗೆ ಸರ್ಕಾರದಿಂದ 5 ಲಕ್ಷ ರೂ ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಪಿರ್ಯಾದಿ ಪರವಾಗಿ ಸರ್ಕಾರಿ ವಕೀಲ ಎ.ಎಂ.ಬಸವರಾಜ್ ವಾದ ಮಂಡಿಸಿದ್ದರು.

Must Read