ಹೊಸದಿಗಂತ ಡಿಜಿಟಲ್ ಡೆಸ್ಕ್:
ನೋಯ್ಡಾದಲ್ಲಿ ವ್ಯಕ್ತಿಯೊಬ್ಬ ತನ್ನ ಮನೆಯ ಬಾಲ್ಕನಿಯಲ್ಲಿ ಹೆಣ್ಣು ನಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಖಾಸಗಿ ಕನ್ಸ್‌ಟ್ರಕ್ಷನ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಪ್ರತಿದಿನವೂ ಕುಡಿದು ಮನೆಗೆ ಬರುತ್ತಿದ್ದ ಎನ್ನಲಾಗಿದೆ. ಕುಡಿತದ ನಶೆಯಲ್ಲಿ ಬಾಲ್ಕನಿಯಲ್ಲಿ ನಿಂತು ನಾಯಿಯ ಮೇಲೆ ಅತ್ಯಾಚಾರಕ್ಕೆ ಮುಂದಾಗಿದ್ದಾನೆ. ಈ ವೇಳೆ ಪಕ್ಕದ ಮನೆಯವರು ನೋಡಿ ಜೋರಾಗಿ ಏನು ಮಾಡುತ್ತಿದ್ದೀರಿ ಎಂದು ಕೂಗಿದ್ದಕ್ಕೆ ಆರೋಪಿ ಗಾಬರಿಗೊಂಡು ನಾಯಿಯನ್ನು ಮೂರನೇ ಮಹಡಿಯಿಂದ ಎಸೆದಿದ್ದಾನೆ.
ನಾಯಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆರೆಹೊರೆಯವರು ನೀಡಿದ ದೂರಿನ ಅನ್ವರ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.