ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಅತ್ಯಾಚಾರದ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇದೀಗ ಮತ್ತೊಂದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಹತ್ತು ರೂಪಾಯಿ ನೀಡುವ ಆಮಿಷ ಒಡ್ಡಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಾಮುಕನೋರ್ವ ಅಪ್ರಾಪ್ತ 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಕಾಮುಕ ಬಾಲಕಿಯ ಅಂಗಾಂಗ ಮುಟ್ಟಿದಾಗ ಪಾಲಕರ ಬಳಿ ವಿಷಯ ತಿಳಿಸಿದ್ದಾಳೆ. ಬಳಿಕ ಕಾಮುಕ ಆಸಿಫ್‌ನನ್ನು ಪಾಲಕರು ಥಳಿಸಿದ್ದಾರೆ. ಆ.16 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಬುಧವಾರ ನಿಪ್ಪಾಣಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ