ಹೊಸದಿಗಂತ ಮಂಡ್ಯ :
ಟ್ಯೂಷನ್‌ಗೆ ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿದ್ದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಡ್ಯ ಜಿಲ್ಲಾ 1ನೇ ತ್ವರಿತಗತಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸೆಂಟರ್ ನಡೆಸುತ್ತಿದ್ದ ಕಾಂತರಾಜು (52) ಶಿಕ್ಷೆಗೊಳಗಾದ ಆರೋಪಿ. ಈತ 2022ರ ಅಕ್ಟೋಬರ್‌ನಲ್ಲಿ ಟ್ಯೂಷನ್‌ಗೆ ಬಂದಿದ್ದ ಬಾಲಕಿಗೆ ಚಾಕೋಲೆಟ್ ಕೊಡಿಸುವುದಾಗಿ ಪುಸಲಾಯಿಸಿ ಸಮೀಪದಲ್ಲೇ ಇದ್ದ ಗಲ್ಲಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದ.
ನಂತರ ಆಕೆಯನ್ನು ಕೊಲೆ ಮಾಡಿ ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಮಯೂರ ಬೇಕರಿ ಹಿಂಭಾಗದಲ್ಲಿ ನಿರ್ಮಾಣ ಹಂತದ ಮನೆಯ ಕಟ್ಟಡದ ನೀರಿನ ಸಂಪಿಗೆ ಬಾಲಕಿ ಶವವನ್ನು ಹಾಕಿದ್ದನು ಎನ್ನಲಾಗಿದೆ.