ಹೊಸದಿಗಂತ ವರದಿ,ಚಿತ್ರದುರ್ಗ:
ಅನಾರೋಗ್ಯದ ಕಾರಣ ಆಸ್ಪತ್ರೆಗೆ ಚಿಕಿತ್ಸೆ ಬಂದಿದ್ದ ವ್ಯಕ್ತಿ ನಾಪತ್ತೆಯಾಗಿದ್ದು, ಗುರುವಾರ ಬೆಳಿಗ್ಗೆ ಚಿತ್ರದುರ್ಗ ಕೋಟೆ ಮುಂಭಾಗ ಶವವಾಗಿ ಪತ್ತೆಯಾಗಿದ್ದಾರೆ.
ಮೃತ ವ್ಯಕ್ತಿಯನ್ನು ಹಿರಿಯೂರು ತಾಲ್ಲೂಕಿನ ಬ್ಯಾರಮಡು ಗ್ರಾಮದ ನಿವಾಸಿ ಸುಧಾಕರ್ (40) ಎಂದು ಗುರುತಿಸಲಾಗಿದೆ. ಇವರು ಲಿವರ್ ಇನ್ಪೇಕ್ಷನ್ ನಿಂದ ಬಳಲುತ್ತಿದ್ದರು. ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು.
ಬುಧವಾರ ತಡರಾತ್ರಿ ಆಸ್ಪತ್ರೆ ಬೆಡ್ ನಿಂದ ಕಾಣೆಯಾಗಿದ್ದರು. ಗುರುವಾರ ಮುಂಜಾನೆ ಅನುಮಾನಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಚಿತ್ರದುರ್ಗದ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲಿಸಿದ್ದಾರೆ.