ಹೊಸದಿಗಂತ ವರದಿ, ಮಂಡ್ಯ:
ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಸಾರಿಗೆ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಗೋಪಾಲಪುರ ಗ್ರಾಮದ ಮಂಡ್ಯ-ನಾಗಮಂಗಲ ರಸ್ತೆಯಲ್ಲಿ ನಡೆದಿದೆ.
ಗ್ರಾಮದ ಚಿಕ್ಕೋನು (70) ಎಂಬಾತನೇ ಮೃತಪಟ್ಟ ವ್ಯಕ್ತಿಯಾಗಿದ್ದು, ಈ ಗ್ರಾಮದ ಶನಿದೇವರ ದೇವಾಲಯದ ಬಳಿ ನಿಂತಿದ್ದ ವೇಳೆ ಮಂಡ್ಯದಿಂದ ನಾಗಮಂಗಲ ಕಡೆಗೆ ಹೋಗುತ್ತಿದ್ದ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಶವವನ್ನು ಮಂಡ್ಯದ ಮಿಮ್ಸ್ ಶವಾಗಾರಕ್ಕೆ ಸಾಗಿಸಿದರು. ಈ ಸಂಬಂಧ ಸೆಂಟ್ರಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.