ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ನದಿಯಲ್ಲಿ ಮುಳುಗಿ ದುರ್ಮರಣ

ಹೊಸದಿಗಂತ ವರದಿ, ಅಂಕೋಲಾ:
ಗಂಗಾವಳಿ ನದಿಯಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರ ನದಿ ನೀರಿಗೆ ಬಿದ್ದು ಮೃತ ಪಟ್ಟ ಘಟನೆ ಸಗಡಗೇರಿಯಲ್ಲಿ ಸಂಭವಿಸಿದೆ.
ಸಗಡಗೇರಿ ಅಂಬಿಗರಕೊಪ್ಪದ ನಿವಾಸಿ ಸೀತಾರಾಮ ಗೋವಿಂದ ಅಂಬಿಗ (37) ಮೃತ ವ್ಯಕ್ತಿ . ಈತ ಸಗಡಗೇರಿ ಗ್ರಾಮದಲ್ಲಿ ಗಂಗಾವಳಿ ನದಿಯಲ್ಲಿ ನಾಡ ದೋಣಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭದಲ್ಲಿ ಬಲೆ ಎಳೆಯುತ್ತಿದ್ದಾಗ ನೀರಿನಲ್ಲಿ ಬಿದ್ದು ಮುಳುಗಿ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತ ದೇಹವನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ತಂದು ಪರೀಕ್ಷೆ ನಡೆಸಲಾಗಿದ್ದು ಈ ಕುರಿತು ಅಂಕೋಲಾ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!