ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆ

ಹೊಸದಿಗಂತ ವರದಿ, ಅಂಕೋಲಾ:

ತಾಲೂಕಿನ ಸುಂಕಸಾಳದ ಅಡಕುಳದಲ್ಲಿ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತ ದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ಸುಂಕಸಾಳ ವಡಬೇಣ ನಿವಾಸಿ ಲಕ್ಷ್ಮಣ ನಾರಾಯಣ ಕುಣಬಿ (39) ಎಂದು ಗುರುತಿಸಲಾಗಿದೆ. ಈತ ಸರಾಯಿ ಕುಡಿತದ ದಾಸನಾಗಿದ್ದ ಇತ್ತೀಚೆಗೆ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.
ಅಕ್ಟೋಬರ್ 23 ರಂದು ಸಂಜೆ 7 ಗಂಟೆಗೆ ಮನೆಯಿಂದ ಹೊರಗೆ ಹೋಗಿದ್ದ ಈತನ ಮೃತ ದೇಹ ಗಣಪತಿ ರಾಮಚಂದ್ರ ಶೇಟ್ ಎನ್ನುವವರಿಗೆ ಸೇರಿದ ಜಮೀನಿನಲ್ಲಿ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ತನಗೆ ಇರುವ ಕಾಯಿಲೆ ಗುಣ ಆಗದೇ ಇರುವುದನ್ನು ಅಥವಾ ಬೇರೆ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು
ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!