ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ʻಆಪರೇಷನ್ ಸಿಂದೂರʼಕ್ಕೆ ನಲುಗಿರುವ ಪಾಕ್ ಗೆ ಇದೀಗ ಮತ್ತೊಂದು ಸವಾಲು ಎದುರಾಗಿದೆ. ಸಾಮರ್ಥ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಭಾರತ ಬಹುದೊಡ್ಡ ಹೆಜ್ಜೆಯನ್ನಿಟ್ಟಿದೆ. ಮೇ 11ರಂದು ಲಕ್ನೋದಲ್ಲಿ ಶಕ್ತಿಶಾಲಿ ಅಸ್ತ್ರವಾದ ಬ್ರಹ್ಮೋಸ್ ಕ್ಷಿಪಣಿ ಉತ್ಪಾದನಾ ಘಟಕ ತಲೆಯೆತ್ತಲಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.
ಇದು ಭಾರತ ಸರ್ಕಾರದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಮತ್ತು ರಷ್ಯಾದ ಸರ್ಕಾರಿ ಸಂಸ್ಥೆ NPO ಮಶಿನೋಸ್ಟ್ರೋನಿನ್ಯಾ ನಡುವಿನ ಜಂಟಿ ಉದ್ಯಮವಾಗಿದೆ.
ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿ ʻಬ್ರಹ್ಮೋಸ್ʼ ವಿಶ್ವದ ಅತ್ಯಂತ ವೇಗದ ಮತ್ತು ವಿನಾಶಕಾರಿ ಕ್ಷಿಪಣಿಗಳಲ್ಲಿ ಒಂದಾಗಿದೆ. ಕ್ಷಿಪಣಿ ಉತ್ಪಾದನಾ ಘಟಕವು ಉತ್ತರ ಪ್ರದೇಶದ ರಕ್ಷಣಾ ವಲಯಕ್ಕೆ ಮಾತ್ರವಲ್ಲದೇ, ಭಾರತದ ರಕ್ಷಣಾ ವಲಯಕ್ಕೆ ಆನೆ ಬಲ ತುಂಬಲಿದೆ.