ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯ ಬೋಹ್ಲಾ ಗ್ರಾಮದ ಟೈರ್ ಫ್ಯಾಕ್ಟರಿಯಲ್ಲಿ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಬಾಗ್‌ಪತ್‌ನ ಬೋಹ್ಲಾ ಗ್ರಾಮದ ಕೊಟ್ವಾಲಿ ಪ್ರದೇಶದಲ್ಲಿರುವ ಟೈರ್ ಫ್ಯಾಕ್ಟರಿಯಲ್ಲಿ ಬೆಂಕಿ ಆವರಿಸಿದೆ. ದೃಶ್ಯಗಳು ಬೆಂಕಿಯಿಂದ ದಟ್ಟವಾದ ಕಪ್ಪು ಹೊಗೆ ಏರುತ್ತಿರುವುದನ್ನು ತೋರಿಸಿದೆ.
ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ ಎಂದು ತಿಳಿಸಿದ್ದಾರೆ.
ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ