ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಥಾಣೆಯಲ್ಲಿರುವ ಡಯಾಪರ್ ತಯಾರಿಕಾ ಕಾರ್ಖಾನೆಯಲ್ಲಿ ಮಂಗಳವಾರ ಮುಂಜಾನೆ ಭಾರಿ ಅಗ್ನಿ ಅವಘಡ ಸಂಭವಿಸಿದೆ.
ಘಟನೆ ಕುರಿತು ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ.
ದೃಶ್ಯಗಳಲ್ಲಿ, ದೊಡ್ಡ ಕಾರ್ಖಾನೆಯ ಕಟ್ಟಡದಿಂದ ಬೃಹತ್ ಜ್ವಾಲೆಗಳು ಹೊರಬರುವುದನ್ನು ಕಾಣಬಹುದು.
ಘಟನೆಯಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.