ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ವಲ್ಸಾದ್ ಜಿಲ್ಲೆಯ ಉಮರ್ಗಾಮ್ ಕೈಗಾರಿಕಾ ಪ್ರದೇಶದ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಶನಿವಾರ ರಾತ್ರಿ ಭಾರೀ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿಯ ಹಿಂದಿನ ನಿಖರವಾದ ಕಾರಣ ಸ್ಪಷ್ಟವಾಗಿಲ್ಲ. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಯನ್ನು ನಿಯಂತ್ರಿಸುವ ಪ್ರಯತ್ನವನ್ನು ಆರಂಭಿಸಿವೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.