Thursday, March 30, 2023

Latest Posts

ಅಗ್ನಿ ರೌದ್ರಾವತಾರ: ಮನೆಗಳನ್ನು ಸುಟ್ಟು ಭಸ್ಮ ಮಾಡಿದ ಬೆಂಕಿಯ ಕೆನ್ನಾಲಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸುಲ್ತಾನ್‌ಪುರದ ಕೊಳೆಗೇರಿಯಲ್ಲಿ ಬೆಂಕಿ ಕಾಣಿಸಿಕೊಂಡು ಪ್ರದೇಶದಾದ್ಯಂತ ದಟ್ಟ ಹೊಗೆ ಆವರಿಸಿದೆ. ಬೆಂಕಿ ವೇಗವಾಗಿ ಹರಡಿದ್ದರಿಂದ ಅಲ್ಲಿದ್ದ ಮನೆಗಳೆಲ್ಲ ಸುಟ್ಟು ಕರಕಲಾಗಿವೆ.

ಸುತ್ತಮುತ್ತಲಿನ ಪ್ರದೇಶಗಳಿಗೂ ಬೆಂಕಿ ವ್ಯಾಪಿಸಿದೆ. ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ 15 ಅಗ್ನಿಶಾಮಕ ವಾಹನಗಳೊಂದಿಗೆ ಬೆಂಕಿಯನ್ನು ಹತೋಟಿಗೆ ತಂದರು.

ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ರೋಬೋಟ್‌ಗಳನ್ನು ಬಳಸಿ ರಕ್ಷಣೆ ಮಾಡಿ ಬೆಂಕಿಯನ್ನು ನಂದಿಸಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸದ ಕಾರಣ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಬೆಂಕಿಯ ರುದ್ರನರ್ತನಕ್ಕೆ ಮನೆಗಳು ಸುಟ್ಟು ಕರಕಲಾಗಿದ್ದು, ಸೂರಿಲ್ಲದೆ ಕೊಳಗೇರಿ ಜನ ಪರದಾಡುವಂತಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!