ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನ ಏಳು ಅಂತಸ್ತಿನ ವಾಣಿಜ್ಯ ಕಟ್ಟಡ ಟೈಮ್ಸ್ ಟವರ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.
ಲೋವರ್ ಪರೇಲ್‌ನ ಕಮಲಾ ಮಿಲ್ ಕಾಂಪೌಂಡ್‌ನಲ್ಲಿ ಬೆಳಿಗ್ಗೆ 6.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ದಳವು ಘಟನಾ ಸ್ಥಳಕ್ಕೆ ಒಂಬತ್ತು ಅಗ್ನಿಶಾಮಕ ವಾಹನಗಳನ್ನು ಕಳುಹಿಸಿದೆ. ಇಲ್ಲಿಯವರೆಗೆ ಯಾವುದೇ ಸಾವು ನೋವುಗಳ ವರದಿಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.