ಹೊಸದಿಗಂತ ವರದಿ, ಮೈಸೂರು:
ಪ್ರತಿ ಜಿಲ್ಲೆಗೊಂದರoತೆ ಸರ್ಕಾರಿ ಮೆಡಿಕಲ್ ಕಾಲೇಜು ಆರಂಭಿಸಲಾಗುವುದೆAದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದರು.
ಶುಕ್ರವಾರ ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಕಾಲೇಜಿನ ಶತಮಾನೋತ್ಸವದ ಅಂಗವಾಗಿ ಏರ್ಪಡಿಸಿದ್ದ ವಸ್ತುಪ್ರದರ್ಷನ ಉದ್ಘಾಟನಾ ಕಾರ್ಯಕ್ರಮದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ 23 ಮೆಡಿಕಲ್ ಕಾಲೇಜುಗಳಿದ್ದು ,ಉಳಿದ ಜಿಲ್ಲೆಗಳಲ್ಲಿಯೂ ಹಣಕಾಸಿನ ಲಭ್ಯತೆ ನೋಡಿಕೊಂಡು ಹೊಸ ಮೆಡಿಕಲ್ ಕಾಲೇಜು ತೆರೆಯಲಾಗುವುದೆಂದರು. ರಾಮನಗರ,ಕನಕಪುರದಲ್ಲೂ ಮೆಡಿಕಲ್ ಸ್ಥಾಪನೆ ಮಾಡಲಾಗುತ್ತೆ. ರಾಮನಗರದಲ್ಲಿ ಈಗಾಗಲೇ ಕೆಲಸ ನಡೆಯುತ್ತಿದೆ.ಚಿಕ್ಕಬಳ್ಳಾಪುರದಲ್ಲಿಯೂ ಈಗಾಗಲೇ ಕೆಲಸ ಆರಂಭವಾಗಿದೆ.ಕನಕಪುರದಲ್ಲಿ ಮೆಡಿಕಲ್ ಸ್ಥಾಪನೆ ಮಾಡುವ ಬಗ್ಗೆ ಸಿಎಂ ಡಿಸಿಎಂ ಜೊತೆ ಚರ್ಚೆ ಮಾಡಲಾಗುತ್ತೆ ಎಂದರು.
ಕೇAದ್ರದ ನೀತಿಯಂತೆ 10 ಲಕ್ಷ ಜನಸಂಖ್ಯೆಗೆ ನೂರು ಮೆಡಿಕಲ್ ಸೀಟುಗಳಿರಬೇಕಾಗುತ್ತದೆ. ನಮ್ಮಲ್ಲಿ ಅದಕ್ಕಿಂತ ಹೆಚ್ಚಿದೆ, ಈ ಹಿಂದೆ ಇಂತಹ ನಿರ್ಬಂಧ ಇರಲಿಲ್ಲ ಇದೊಂದು ರೀತಿ ದಕ್ಷಿಣದ ರಾಜ್ಯಗಳ ವಿರುದ್ದದ ಮಲತಾಯಿ ಧೋರಣೆ ಎಂದರು.
ಮೆಡಿಕಲ್ ಸೀಟುಗಳ ಸಂಖ್ಯೆಯಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದೆ.ಪ್ರತಿವರ್ಷ 12 ಸಾವಿರ ಸೀಟುಗಳನ್ನು ನೀಡುತಿದ್ದೇವೆ , ಹಾಗೂ ಸಾಕಷ್ಟು ಖಾಸಗಿ ಮೆಡಿಕಲ್ ಕಾಲೇಜುಗಳಿದ್ದು ಸಾಕಷ್ಟು ಸೀಟುಗಳು ಲಭ್ಯವಿವೆ ಎಂದರು.
ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಮೈಸೂರು ಮೆಡಿಕಲ್ ಕಾಲೇಜು ಜ್ನಾಪಕಾರ್ಥಕವಾಗಿ ಮೈಸೂರಿನಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಲು 5 ಎಕರೆ ಜಾಗ ಗುರುತಿಸಲಾಗಿದ್ದು ಪ್ರಕ್ರಿಯೆ ಆರಂಭವಾಗಿದೆ ಎಂದರು.