ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಕೇಸ್‌ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್‌: 

ತೃಣಮೂಲ ಕಾಂಗ್ರೆಸ್‌ ನಾಯಕಿ ಮಹುವಾ ಮೊಯಿತ್ರಾ ವಿರುದ್ಧ ಜಾರಿ ನಿರ್ದೇಶನಾಲಯ (Enforcement Directorate)ಕೇಸ್‌ (Money Laundering Case) ದಾಖಲಿಸಿದೆ.

ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ (CBI) ದಾಖಲಿಸಿದ ಎಫ್‌ಐಆರ್‌ ಆಧರಿಸಿ, ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಲಾಗಿದೆ.

ವಿಚಾರಣೆಗಾಗಿದೆಹಲಿ ಕಚೇರಿಗೆ ಹಾಜರಾಗುವಂತೆ ನೀಡಿದ್ದ ಏಜೆನ್ಸಿಯ ಸಮನ್ಸ್ ಅನ್ನು ಮಹುವಾ ಮೊಯಿತ್ರಾ ತಪ್ಪಿಸಿಕೊಂಡ ಹಿನ್ನೆಲೆಯಲ್ಲಿ ಇ.ಡಿ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆ ಪ್ರಕರಣದಲ್ಲಿ ವಿಚಾರಣೆಗಾಗಿ ಮೊಯಿತ್ರಾ ಮತ್ತು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಈ ಸಮನ್ಸ್‌ ಅನ್ನು ಮೊಯಿತ್ರ ನಿರಾಕರಿಸಿದ್ದರು ಎಂದು ಹೇಳಲಾಗಿದೆ.

ಬಿಜೆಪಿ ಲೋಕಸಭಾ ಸದಸ್ಯ ನಿಶಿಕಾಂತ್ ದುಬೆ ಅವರು ಮೊಯಿತ್ರಾ ವಿರುದ್ಧ ಪ್ರಶ್ನೆಗಾಗಿ ಹಣ ಪಡೆದ ಆರೋಪ ಮಾಡಿದ್ದರು. ನಂತರ ಮೊಯಿತ್ರಾ ವಿರುದ್ಧ ಲೋಕಪಾಲ್ ನಿರ್ದೇಶನದ ಮೇರೆಗೆ ಎಫ್‍ಐಆರ್ ದಾಖಲಿಸಲಾಗಿತ್ತು. ಪ್ರಶ್ನೆಗಾಗಿ ಹಣ ಪಡೆದ ಆರೋಪದ ಮೇಲೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹುವಾ ಅವರಿಗೆ ಸಂಬಂಧಿಸಿದ ಕೋಲ್ಕತ್ತಾದ ಹಲವು ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ (CBI) ಶೋಧ ಕಾರ್ಯ ನಡೆಸಿ ಎಫ್‍ಐಆರ್ ಸಹ ದಾಖಲಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!