4 ತಿಂಗಳ ಕಂದಮ್ಮನನ್ನು ಉಗ್ರ ರೂಪ ತಾಳಿ ಕಟ್ಟಡದಿಂದ ಕೆಳಗೆಸೆದ ಕೋತಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉತ್ತರಪ್ರದೇಶದಲ್ಲಿ ಕೋತಿಯೊಂದು ಉಗ್ರ ರೂಪ ತಾಳಿ ನಾಲ್ಕು ತಿಂಗಳ ಮಗುವನ್ನು ಕಟ್ಟಡದಿಂದ ಕೆಳಗೆಸೆದ ಪರಿಣಾಮ ಮಗು ಸಾವನ್ನಪ್ಪಿದ ಘಟನೆ ನಡೆದಿದೆ.
ವರದಿಯ ಪ್ರಕಾರ, ಬರೇಲಿಯ ಗ್ರಾಮಾಂತರ ಪ್ರದೇಶದಲ್ಲಿ 4 ತಿಂಗಳ ಮಗು ತನ್ನ ಹೆತ್ತವರೊಂದಿಗೆ ಟೆರೇಸ್‌ನಲ್ಲಿದ್ದಾಗ ಕೋತಿಗಳ ಗುಂಪು ಛಾವಣಿಯ ಮೇಲೆ ಬಂದಿದೆ. ಈ ವೇಳೆ ಮಗುವಿನ ಪೋಷಕರು ಮಂಗಗಳನ್ನು ಓಡಿಸಲು ಪ್ರಯತ್ನಿಸುತ್ತಿರುವಾಗ ಈ ಘಟನೆ ಸಂಭವಿಸಿದೆ.
ಕೋತಿಯೊಂದು ಮೂರು ಅಂತಸ್ತಿನ ಮನೆಯ ಛಾವಣಿಯಿಂದ ಮಗುವನ್ನು ಕೆಳಗೆ ಎಸೆದ ಪರಿಣಾಮ ನಾಲ್ಕು ತಿಂಗಳ ಗಂಡು ಮಗು ಸಾವನ್ನಪ್ಪಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆ ಕುರಿತು ವರದಿಯಾಗಿದ್ದು, ತನಿಖೆ ನಡೆಸಲು ಅರಣ್ಯ ಇಲಾಖೆಯ ತಂಡವನ್ನು ಕಳುಹಿಸಲಾಗಿದೆ ಎಂದು ಬರೇಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಲಿತ್ ವರ್ಮಾ ತಿಳಿಸಿದ್ದಾರೆ.
ಬರೇಲಿಯ ಡುಂಕಾ ಗ್ರಾಮದ ನಿವಾಸಿ ನಿರ್ದೇಶ್ ಉಪಾಧ್ಯಾಯ (25) ಅವರು ಶುಕ್ರವಾರ ಸಂಜೆ ತಮ್ಮ ನಾಲ್ಕು ತಿಂಗಳ ಮಗು ಹಾಗೂ ಪತ್ನಿಯೊಂದಿಗೆ ತಮ್ಮ ಮೂರು ಅಂತಸ್ತಿನ ಮನೆಯ ಟೆರೇಸ್ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕೋತಿಗಳ ಹಿಂಡು ಛಾವಣಿಯ ಮೇಲೆ ಬಂದವು.ದಂಪತಿಯನ್ನು ಸುತ್ತುವರೆದವು. ಈ ವೇಳೆ ಮೆಟ್ಟಿಲುಗಳತ್ತ ಸಾಗಿದಾಗ ಮಗು ನಿರ್ದೇಶ್‌ ಕೈಯಿಂದ ಕೆಳಗೆ ಬಿದ್ದಿದ್ದು, ಈ ವೇಳೆ ಮಗುವನ್ನು ನಿರ್ದೇಶ್‌ ಎತ್ತಿಕೊಳ್ಳುವ ಮೊದಲು ಮಂಗವೊಂದು ಎತ್ತಿಕೊಂಡು ಹೋಗಿ ಮಹಡಿಯಿಂದ ಕೆಳಗೆ ಎಸೆದಿದೆ. ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!