ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯೊಬ್ಬಳು ನವಜಾತ ಶಿಶುವನ್ನು ಚರಂಡಿಗೆ ಎಸೆದು ಹೋಗಿರುವ ಹೃದಯವಿದ್ರಾವಕ ಘಟನೆ ವಿಜಯಪುರ (Vijayapura) ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಲಕೊಪ್ಪರ ಗ್ರಾಮದಲ್ಲಿ ನಡೆದಿದೆ.
ಮಹಿಳೆಯ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ಮಹಿಳೆ ಮೃತಪಟ್ಟ ನವಜಾತ ಶಿಶುವನ್ನು ಪ್ಲಾಸ್ಟಿಲ್ ಹಾಳೆಯಲ್ಲಿ ಸುತ್ತಿ ಚರಂಡಿಗೆ ಎಸೆದು ಅಲ್ಲಿಂದ ಜಾಗ ಖಾಲಿ ಮಾಡಿದ್ದಾಳೆ. ಇತ್ತ ಶಿಶುವನ್ನು ಗಮನಿಸಿದ ಗ್ರಾಮಸ್ಥರು ಚರಂಡಿಯಿಂದ ಗಂಡು ಮಗುವನ್ನು ಮೇಲಕ್ಕೆತ್ತಿದ್ದಾರೆ. ಅಲ್ಲದೇ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ.