ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆ. ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತೆ. ಆದರೆ ಕಟುಕರು ಅಳುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಮೈಸೂರಿಗೆ ಭೇಟಿ ನೀಡಿದ ಕುಮಾರಸ್ವಾಮಿ ತಾಯಿ ಚಾಮುಂಡೇಶ್ವರಿಯ ದರುಶನ ಪಡೆದು ಸುತ್ತೂರು ಮಠಕ್ಕೆ ಭೇಟಿ ನೀಡಿದರು. ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್ ಡಿಕೆ, ಕಾಂಗ್ರೆಸ್ ಮುಖಂಡರ ಲೇವಡಿಗೆ ಪ್ರತಿಕ್ರಿಯಿಸಿದರು.
ನಾನು ಹಲವು ಬಾರಿ ಕಣ್ಣೀರು ಹಾಕಿದ್ದೇನೆ. ಕಣ್ಣೀರು ಹಾಕಿರುವುದು ಅನುಕಂಪ ಗಿಟ್ಟಿಸಿಕೊಳ್ಳುವುದಕ್ಕಲ್ಲ. ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತದೆ. ರಾಜಕಾರಣದಲ್ಲಿ ಕಟುಕರಿದ್ದಾರೆ. ಭಯ ಭಕ್ತಿ ಇಲ್ಲದವರ ಕಣ್ಣಲ್ಲಿ ನೀರು ಬರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.