ಹೊಸದಿಗಂತ ವರದಿ, ಹಾವೇರಿ:
ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರಿಗೆ ದಿಢೀರ್ ಬೆಂಕಿ ಹೊತ್ತಿಕೊಂಡು ಧಗಧಗನೇ ಉರಿದ ಘಟನೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ನಡೆದಿದೆ.
ಏಕಾಏಕಿ ಸ್ಕಾರ್ಪಿಯೋ ಕಾರಿಗೆ ಬೆಂಕಿ ಹತ್ತಿ ಧಗಧಗನೇ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರಿನಲ್ಲಿದ್ದ ನಾಲ್ವರು ಗೋವಾಕ್ಕೆ ಹೋಗಿ ಬೆಂಗಳೂರಿಗೆ ಮರಳುತ್ತಿದ್ದಾಗ ನಡೆದ ನಡೆದಿದ್ದು , ತಾಂತ್ರಿಕ ದೋಷದಿಂದ ಸ್ಕಾರ್ಪಿಯೋ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸುವಷ್ಟರಲ್ಲಿಯೇ ಕಾರು ಉರಿದು ಭಸ್ಮವಾಗಿತ್ತು. ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.