ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆಯಲ್ಲಿ ಚಲಿಸಿಕೊಂಡು ಹೋಗುತ್ತಿದ್ದ ಲಾರಿಯೊಂದರಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಸುಳ್ಯದ ಜೋಡುಪಾಲದ ಬಳಿ ಶನಿವಾರ ತಡ ರಾತ್ರಿ ಸಂಭವಿಸಿದೆ.
ಹೆಚ್ ಡಿ ಕೋಟೆಯಿಂದ ಉಡುಪಿ ಕಡೆಗೆ ಭತ್ತ ಸಾಗಿಸುತ್ತಿದ್ದ ಈಚರ್ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತು ಎನ್ನಲಾಗಿದೆ.
ಇದನ್ನು ಗಮನಿಸಿದ ಲಾರಿ ಚಾಲಕ ಹಾಗೂ ಕ್ಲೀನರ್ ಲಾರಿಯನ್ನು ರಸ್ತೆ ಪಕ್ಕ ನಿಲ್ಲಿಸಿ, ಕೆಳಗಿಳಿದಿದ್ದಾರೆ.
ಈ ವೇಳೆ ಕೆಲವೇ ಕ್ಷಣದಲ್ಲಿ ಬೆಂಕಿ ಇಡೀ ಲಾರಿಗೆ ವ್ಯಾಪಿಸಿ ನೋಡು ನೋಡುತಿದ್ದಂತೆ ಲಾರಿ ಸುಟ್ಟು ಕರಗಲಾಗಿದೆ. ಘಟನೆಯಿಂದ ಕೆಲವು ಗಂಟೆಗಳ ಕಾಲ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.