ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಗೆ ಮುಹೂರ್ತ ಫಿಕ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಹು ನಿರೀಕ್ಷಿತ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೆ ಮುಹೂರ್ತ ಸಜ್ಜಾಗಿದೆ. ನಾಳೆ (ಮಾ. 16) ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗದ ಆಯುಕ್ತರು ಸುದ್ದಿಗೋಷ್ಠಿ ನಡೆಸಲಿದ್ದು, ನಾಳೆ ಲೋಕಸಭೆ ಚುನಾವಣೆ ದಿನಾಂಕ ನಿರ್ಧಾರವಾಗುವ ನಿರೀಕ್ಷೆ ಇದೆ.

ನಾಳೆ ಮಧ್ಯಾಹ್ನ 3 ಗಂಟೆಗೆ ದೆಹಲಿಯ ವಿಜ್ಞಾನ್ ಭವನದಲ್ಲಿ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ಚುನಾವಣಾ ಆಯೋಗ ಲೋಕಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸಲಿದೆ.

ಇಂದು ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾಗಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದರು. ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ ದಿನಾಂಕವನ್ನು ಘೋಷಿಸಲು ಪತ್ರಿಕಾಗೋಷ್ಠಿಯನ್ನು ನಿಗದಿಪಡಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!