ಬಹುಕೋಟಿ ಮೇವು ಹಗರಣ: ಲಾಲೂ ಪ್ರಸಾದ್ ಜಾಮೀನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್‌ಗೆ ಜಾಮೀನು ಮಂಜೂರು ಮಾಡಿದ ಜಾರ್ಖಂಡ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದೆ.
ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್ ಮತ್ತು ಬಿ.ಆರ್.ಗವಾಯಿ ಅವರಿದ್ದ ಪೀಠವು ಅರ್ಜಿಯ ವಿಚಾರಣೆ ನಡೆಸಲು ಸಮ್ಮತಿಸಿದ್ದು, ಈ ಬಗ್ಗೆ ಪ್ರಕ್ರಿಯೆ ನೀಡುವಂತೆ ಲಾಲೂ ಪ್ರಸಾದ್​ಗೆ ಸೂಚಿಸಲಾಗಿದೆ.
ಐದು ಮೇವು ಹಗರಣದಲ್ಲಿ ದೋಷಿಯಾಗಿರುವ ಲಾಲೂ ಪ್ರಸಾದ್​ಗೆ ಈಗಾಗಲೇ ಎರಡು ಪ್ರಕರಣಗಳಲ್ಲಿ ಜಾರ್ಖಂಡ್ ಹೈಕೋರ್ಟ್‌ನ ಜಾಮೀನು ಮಂಜೂರು ಮಾಡಿದೆ. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.
ಇನ್ನು, ಚೈಬಾಸಾ ಮತ್ತು ದಿಯೋಘರ್ ಖಜಾನೆ ವಿಷಯದಲ್ಲೂ ಲಾಲು ದೋಷಿಯಾಗಿದ್ದು, ಈ ಎರಡೂ ಪ್ರಕರಣಗಳು ಜಾಮೀನು ಮಂಜೂರಾಗಿದೆ. ಐದನೇ ಡೊರಾಂಡಾ ಖಜಾನೆ ವಿಷಯದಲ್ಲೂ ಐದು ವರ್ಷ ಜೈಲು ಶಿಕ್ಷೆ ಮತ್ತು 60 ಲಕ್ಷ ರೂ. ದಂಡವನ್ನು ಆರ್‌ಜೆಡಿ ವರಿಷ್ಠನಿಗೆ ವಿಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!