ಬಾಂಗ್ಲಾ ಕ್ರಿಕೆಟಿಗ ಶಕಿಬ್ ಅಲ್ ಹಸನ್ ವಿರುದ್ಧ ಕೊಲೆ ಕೇಸ್ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ಶಕಿಬ್ ಅಲ್ ಹಸನ್ ವಿರುದ್ಧ ಕೊಲೆ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದೆ.

ಬಾಂಗ್ಲಾದೇಶದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಆಪಾದಿತ ಕೊಲೆಗೆ ಸಂಬಂಧಿಸಿದಂತೆ 147 ಜನರಲ್ಲಿ ಶಕಿಬ್​ ಕೂಡ ಸೇರಿದ್ದಾರೆ ಎಂದು ಢಾಕಾದ ಅಡಾಬೋರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಇಎಸ್‌ಪಿಎನ್‌ ಕ್ರಿಕ್‌ ಇನ್‌ಫೋಗೆ ಖಚಿತಪಡಿಸಿದ್ದಾರೆ.

ರಫೀಕುಲ್ ಇಸ್ಲಾಂ ಎನ್ನುವ ವ್ಯಕ್ತಿ ಪ್ರಕರಣ ದಾಖಲಿಸಿದ್ದು, ಢಾಕಾದಲ್ಲಿ ನಡೆದ ಪ್ರತಿಭಟನೆಯ ವೇಳೆ ತನ್ನ ತಂದೆಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಢಾಕಾದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಶಕಿಬ್​ ಅಲ್ ಹಸನ್ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಕಿಬ್ ಮಾತ್ರವಲ್ಲ, ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಸೇರಿದಂತೆ ಒಟ್ಟು 500 ಮಂದಿಯನ್ನು ಇದರಲ್ಲಿ ಆರೋಪಿಗಳನ್ನಾಗಿ ಮಾಡಲಾಗಿದೆ.

ಮೀಸಲಾತಿಯ ವಿರುದ್ಧ ಸಾರ್ವಜನಿಕರು ದಂಗೆ ಎದ್ದ ಬಳಿಕ ಶೇಖ್ ಹಸೀನಾ ದೇಶದಿಂದ ಪಲಾಯನ ಮಾಡಿದ್ದರು. ಶಕೀಬ್ ಅಲ್ ಹಸನ್, ಶೇಖ್ ಹಸೀನಾಗೆ ಆತ್ಮೀಯರಾಗಿರುವ ಕಾರಣ ಅವರ ವಿರುದ್ಧ ಈ ಸುಳ್ಳು ಆರೋಪವನ್ನು ಕೂಡ ಮಾಡಿರುವ ಸಾಧ್ಯತೆ ಇದೆ. ಶಕಿಬ್ ಅಲ್ ಹಸನ್ ಅವರು ಕಳೆದ ಬಾಂಗ್ಲಾದೇಶ ಸಂಸತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಶೇಖ್‌ ಹಸೀನಾ ಅವರ ಪಕ್ಷವಾದ ಅವಾಮಿ ಲೀಗ್ ಪಕ್ಷದ ಪರವಾಗಿ ಮಗುರಾ-1ರಲ್ಲಿ ಚುನಾವಣೆ ಸ್ಪರ್ಧಿಸಿದ್ದ ಶಕೀಬ್ ಅಲ್ ಹಸನ್ ಭರ್ಜರಿ ಗೆಲುವು ಸಾಧಿಸಿದ್ದರು. ಇದೀಗ ಕೊಲೆ ಕೇಸ್​ನಲ್ಲಿ ಅವರ ಹೆಸರು ಕೇಳಿ ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!