ಬಾಂಗ್ಲಾದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಮತ್ತು ಇತರ ಆರು ಜನರ ವಿರುದ್ಧ ಕಳೆದ ತಿಂಗಳು ನಡೆದ ಹಿಂಸಾತ್ಮಕ ಘರ್ಷಣೆಯ ಸಮಯದಲ್ಲಿ ಕಿರಾಣಿ ಅಂಗಡಿಯ ಮಾಲೀಕನ ಸಾವಿನ ಬಗ್ಗೆ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ವಿವಾದಾತ್ಮಕ ಉದ್ಯೋಗ ಕೋಟಾ ವ್ಯವಸ್ಥೆಗೆ ಸಂಬಂಧಿಸಿದಂತೆ ಅವರ ಅವಾಮಿ ಲೀಗ್ ನೇತೃತ್ವದ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಂತರ ಕಳೆದ ವಾರ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ ನಂತರ ಹಸೀನಾ ವಿರುದ್ಧ ಮೊಟ್ಟಮೊದಲ ಬಾರಿಗೆ ಪ್ರಕರಣ ದಾಖಲಾಗಿತ್ತು.

ಮೊಹಮ್ಮದ್‌ಪುರದಲ್ಲಿ ಕೋಟಾ ಸುಧಾರಣಾ ಆಂದೋಲನವನ್ನು ಬೆಂಬಲಿಸುವ ಮೆರವಣಿಗೆಯಲ್ಲಿ ಜುಲೈ 19 ರಂದು ಪೊಲೀಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ ಕಿರಾಣಿ ಅಂಗಡಿ ಮಾಲೀಕ ಅಬು ಸೈಯದ್ ಅವರ ಹಿತೈಷಿ ಈ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಢಾಕಾ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.

ಇತರ ಆರೋಪಿಗಳೆಂದರೆ ಅವಾಮಿ ಲೀಗ್‌ನ ಪ್ರಧಾನ ಕಾರ್ಯದರ್ಶಿ ಒಬೈದುಲ್ ಕ್ವಾಡರ್, ಮಾಜಿ ಗೃಹ ಸಚಿವ ಅಸಾದುಝಮಾನ್ ಖಾನ್ ಕಮಾಲ್, ಮತ್ತು ಮಾಜಿ ಪೊಲೀಸ್ ಮಹಾನಿರೀಕ್ಷಕ ಚೌಧರಿ ಅಬ್ದುಲ್ಲಾ ಅಲ್ ಮಾಮುನ್ ವಿರುದ್ಧ ಪ್ರಕರಣ ದಾಖಲಾಗಿದೆ.

ಅಲ್ಲದೆ, ಹಲವಾರು ಹೆಸರು ಹೇಳಲಿಚ್ಛಿಸದ ಉನ್ನತ ಶ್ರೇಣಿಯ ಪೊಲೀಸ್ ಅಧಿಕಾರಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಕೂಡ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!