ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಡಿಆರ್ಡಿಒ ಭಾರತದ ಹೊಸ ತಲೆಮಾರಿನ ಆಕಾಶ್ ಕ್ಷಿಪಣಿ ಪ್ರಯೋಗವನ್ನು ಯಶಸ್ವಿಯಾಗಿಸಿದೆ.
ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಆಕಾಶ್ ಕ್ಷಿಪಣಿಗೆ ಭೂಮಿಯಿಂದ ಆಕಾಶಕ್ಕೆ ಚಿಮ್ಮುವ ಸಾಮರ್ಥ್ಯ ಇದೆ.
ಒಡಿಶಾದ ಕಡಲ ತೀರದಲ್ಲಿ ನಿನ್ನೆ 12:45 ಸುಮಾರಿಗೆ ಕ್ಷಿಪಣಿ ಪ್ರಯೋಗ ನಡೆದಿದೆ.
ಯಾವುದೇ ಸಮಸ್ಯೆಯಿಲ್ಲದೆ ನಿರೀಕ್ಷಿತ ಪ್ರಮಾಣದಲ್ಲಿ ಕ್ಷಿಪಣಿ ವ್ಯವಸ್ಥೆ ಕಾರ್ಯಕ್ಷಮತೆಯನ್ನು ಫ್ಲೈಟ್ ಡೇಟಾ ದೃಢಪಡಿಸಿದೆ ಎಂದು ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ. ಆಕಾಶ್ ಕ್ಷಿಪಣಿ 60 ಕಿ.ಮೀ ದೂರದ ಗುರಿಯನ್ನು ತಲುಪಬಲ್ಲದು.