ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ಶೀಘ್ರದಲ್ಲೇ ತಾಯಿಯಾಗಲಿದ್ದಾರೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ತಮ್ಮ ನಟನೆಯ ‘ಮಾ ಇಂಟಿ ಬಂಗಾರಂ’ ಚಿತ್ರದ ಸಕ್ಸಸ್ ಮೀಟ್‌ನಲ್ಲಿ ಅವರು ಈ ಸಿಹಿ ಸುದ್ದಿಯನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಸದ್ಯದಲ್ಲೇ ಹೆರಿಗೆ ರಜೆ ಪಡೆದು ಚಿತ್ರರಂಗದಿಂದ ಸಣ್ಣ ಬ್ರೇಕ್ ತೆಗೆದುಕೊಳ್ಳಲಿರುವ ಅವರು, ನಂತರ ಮತ್ತೆ ಕಮ್‌ಬ್ಯಾಕ್ ಮಾಡುವುದಾಗಿ ತಿಳಿಸಿದ್ದಾರೆ.
ವೈರಲ್ ಆದ ಬೇಬಿ ಬಂಪ್ ಫೋಟೋ
ಸಮಂತಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ತಮ್ಮ ಬೇಬಿ ಬಂಪ್ (Baby Bump) ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ‘ನನ್ನ ಸಿಕ್ಸ್ ಪ್ಯಾಕ್’ ಎಂದು ಕ್ಯೂಟ್ ಆಗಿ ಕ್ಯಾಪ್ಶನ್ ಬರೆದಿದ್ದು, ಮಗುವಿನ ಆಗಮನಕ್ಕಾಗಿ ಕಾಯುತ್ತಿರುವುದಾಗಿ ಹೇಳಿದ್ದಾರೆ. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ರಾಜ್ ನಿಡಿಮೋರು ಜೊತೆ ವಿವಾಹ
ಕಳೆದ ವರ್ಷ ಡಿಸೆಂಬರ್ 1 ರಂದು ಸಮಂತಾ ಅವರು ಪ್ರಸಿದ್ಧ ನಿರ್ದೇಶಕ ರಾಜ್ ನಿಡಿಮೋರು ಅವರನ್ನು ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ಸರಳವಾಗಿ ವಿವಾಹವಾಗಿದ್ದರು. ವೆಬ್ ಸೀರಿಸ್ ಚಿತ್ರೀಕರಣದ ಸಮಯದಲ್ಲಿ ಇವರಿಬ್ಬರ ನಡುವೆ ಪ್ರೀತಿ ಚಿಗುರಿತ್ತು.
‘ಮಾ ಇಂಟಿ ಬಂಗಾರಂ’ ಬಾಕ್ಸ್ ಆಫೀಸ್ ಧೂಳ್
ನಂದಿನಿ ರೆಡ್ಡಿ ನಿರ್ದೇಶನದ ‘ಮಾ ಇಂಟಿ ಬಂಗಾರಂ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸರಿಸುಮಾರು 80 ಕೋಟಿ ರೂಪಾಯಿ ಗಳಿಸಿ ಸೂಪರ್ ಹಿಟ್ ಆಗಿದೆ. ಈ ಚಿತ್ರದಲ್ಲಿ ದಿಗಂತ್ ಮತ್ತು ಗುಲ್ಶನ್ ದೇವಯ್ಯ ಪ್ರಮುಖ ಪಾತ್ರಗಳಲ್ಲಿದ್ದಾರೆ.



