ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಗೆ (Lok Sabha Election 2024) ಹೊಸ್ತಿಲಲ್ಲೇ ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.
ಇಂದು(ಮಾರ್ಚ್ 14) ದೆಹಲಿಯಲ್ಲಿ ಶಾ ಭೇಟಿ ಮಾಡಿ ಪ್ರಸಕ್ತ ರಾಜ್ಯ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ಭೇಟಿಗೆ ಖುದ್ದು ಅಮಿತ್ ಶಾ ಅವರೇ ರೆಡ್ಡಿಗೆ ಆಹ್ವಾನ ನೀಡಿರುವುದು ಭಾರೀ ಕುತೂಹಲ ಮೂಡಿಸಿದೆ.
ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿರುವ ಬಗ್ಗೆ ರೆಡ್ಡಿ ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಫೋಟೋ ಸಮೇತ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಭಾರತ ರಾಷ್ಟ್ರದ ಕೇಂದ್ರ ಗೃಹಮಂತ್ರಿಗಳಾದ ಅಮಿತ್ ಶಾ ಜಿಯವರ ಆಹ್ವಾನದ ಮೇರೆಗೆ ನವದೆಹಲಿಯಲ್ಲಿ ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷನಾಗಿ ಭೇಟಿ ಮಾಡಿ ಕರ್ನಾಟಕ ರಾಜ್ಯದ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು, ನನಗೆ ಬಹಳ ಸಂತೋಷವನ್ನು ತಂದಿದೆ ಎಂದು ಬರೆದುಕೊಂಡಿದ್ದಾರೆ.
ಭಾರತ ರಾಷ್ಟ್ರದ ಕೇಂದ್ರ ಗೃಹಮಂತ್ರಿಗಳಾದ ಅಮಿತ್ ಶಾ ಜಿಯವರ ಆಹ್ವಾನದ ಮೇರೆಗೆ ನವದೆಹಲಿಯಲ್ಲಿ ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷನಾಗಿ ಭೇಟಿ ಮಾಡಿ ಕರ್ನಾಟಕ ರಾಜ್ಯದ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು ನನಗೆ ಬಹಳ ಸಂತೋಷವನ್ನು ತಂದಿದೆ.
-ಗಾಲಿ ಜನಾರ್ಧನ ರೆಡ್ಡಿ. pic.twitter.com/Z3IUfc7MCC
— Gali Janardhana Reddy (@GaliJanardhanar) March 14, 2024
ಆದ್ರೆ, ಇದೀಗ ಏಕಾಏಕಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.