ಹೊಸದಿಗಂತ ಡಿಜಿಟಲ್ ಡೆಸ್ಕ್:
‘ವಿಕಸಿತ್ ಭಾರತ್’ ಗುರಿಯನ್ನು ತಲುಪಲು ದೇಶದ ಬ್ಯಾಂಕಿಂಗ್ ವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ಒಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುತ್ತಿದ್ದು, ಈ ಸಮಿತಿಯು ಹಣಕಾಸು ಕ್ಷೇತ್ರದ ಎಲ್ಲಾ ಆಯಾಮಗಳನ್ನು ಆಳವಾಗಿ ಅಧ್ಯಯನ ಮಾಡಲಿದೆ.
ಪ್ರಮುಖವಾಗಿ ಹೂಡಿಕೆದಾರರಿಗೆ ಸೂಕ್ತ ಮಾರ್ಗದರ್ಶನ ನೀಡುವುದು ಮತ್ತು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಗ್ರಾಹಕರ ಹೂಡಿಕೆಗೆ ಹೆಚ್ಚಿನ ಸುರಕ್ಷತೆ ಹಾಗೂ ಭದ್ರತೆಯನ್ನು ಖಚಿತಪಡಿಸುವುದು ಈ ಸಮಿತಿಯ ಪ್ರಮುಖ ಉದ್ದೇಶವಾಗಿದೆ.



