ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ ಹೊಸ ಟೋಲ್ ನೀತಿಯನ್ನು ಪರಿಚಯಿಸಲು ಸರ್ಕಾರ ಚಿಂತನೆ ನಡೆಸಿದೆ. ಕಿಲೋಮೀಟರ್ ಆಧಾರಿತ ಹೊಸ ಟೋಲ್ ತೆರಿಗೆ ನೀತಿ ಜಾರಿಗೆ ತರಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ.
ಹೊಸ ನೀತಿಯಲ್ಲಿ ಪ್ರಯಾಣಿಕರು ತಾವು ಪ್ರಯಾಣಿಸಿದ ನಿಖರವಾದ ಕಿಲೋಮೀಟರ್ ದೂರದ ಆಧಾರದ ಮೇಲೆ ಟೋಲ್ ಶುಲ್ಕವನ್ನು ಪಾವತಿಸಬಹುದಾಗಿದೆ.
ಪ್ರಯಾಣಿಕರು ತಾವು ಹೆದ್ದಾರಿಯಲ್ಲಿ ಪ್ರಯಾಣಿಸಿದ ನಿಖರ ಕಿಲೋಮೀಟರ್‌ಗೆ ಅನುಗುಣವಾಗಿ ಟೋಲ್ ಶುಲ್ಕವನ್ನು ಪಾವತಿಸಬಹುದು. ಇದು ಸ್ಥಿರ ಟೋಲ್ ಶುಲ್ಕದ ಪ್ರಸ್ತುತ ವಿಧಾನವನ್ನು ಬದಲಾಯಿಸುತ್ತದೆ.