June 13, 2026
Saturday, June 13, 2026
spot_img

ರಾಜ್ಯದ ಶೈಕ್ಷಣಿಕ ರಂಗದಲ್ಲಿ ಹೊಸ ಅಲೆ, ಸರ್ಕಾರಿ ಕಾಲೇಜುಗಳಲ್ಲಿ 50 AI ಲ್ಯಾಬ್‌ ಸ್ಥಾಪನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಶೈಕ್ಷಣಿಕ ರಂಗದಲ್ಲಿ ಹೊಸ ಕ್ರಾಂತಿ ಆರಂಭವಾಗಿದೆ. ಸರ್ಕಾರಿ ಕಾಲೇಜುಗಳಲ್ಲಿ 50 AI ಲ್ಯಾಬ್‌ಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

ಸಣ್ಣ ನಗರಗಳ ವಿದ್ಯಾರ್ಥಿಗಳ ಉದ್ಯೋಗವಕಾಶ ಹೆಚ್ಚಿಸಲು ಈ ಯೋಜನೆಯನ್ನು ಕೇಂದ್ರದ ಎಐ ಮಿಷನ್‌ ಸಹಭಾಗಿತ್ವದಲ್ಲಿ ಜಾರಿಗೊಳಿಸಲಾಗಿದೆ. ಆಯ್ದ ಸರ್ಕಾರಿ ಕಾಲೇಜುಗಳಲ್ಲಿ ಈ ಅತ್ಯಾಧುನಿಕ AI ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. ಇದು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆ, ಹೊಸ ಪ್ರಯೋಗಗಳು, ಕೌಶಲ್ಯಾಭಿವೃದ್ಧಿ ಮತ್ತು ನಾವೀನ್ಯತೆಗೆ ಭದ್ರವಾದ ಮೂಲಸೌಕರ್ಯವನ್ನು ಒದಗಿಸಲಿದೆ.

2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾಗಿದ್ದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಕೇಂದ್ರ ಸರ್ಕಾರದ ‘ಎಐ ಮಿಷನ್’ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಸ್ಥಾಪನೆಯಾಗುವ ಪ್ರತಿ ಪ್ರಯೋಗಾಲಯಕ್ಕೆ ಒಟ್ಟು 68.98 ಲಕ್ಷ ರೂಪಾಯಿ ಆರ್ಥಿಕ ನೆರವು ಸಿಗಲಿದ್ದು, ಮೂರು ವರ್ಷಗಳ ಅವಧಿಯಲ್ಲಿ ಮೂರು ಕಂತುಗಳಲ್ಲಿ ಈ ಹಣ ಬಿಡುಗಡೆಯಾಗಲಿದೆ.

ಈ ಯೋಜನೆಯ ಮೊದಲ ಹಂತವಾಗಿ ರಾಜ್ಯದ 23 ಪ್ರಮುಖ ಶೈಕ್ಷಣಿಕ ಸಂಸ್ಥೆಗಳನ್ನು ಆಯ್ಕೆ ಮಾಡಲು ಗ್ರೀನ್‌ ಸಿಗ್ನಲ್‌ ನೀಡಿದೆ. ಇದು ಭವಿಷ್ಯದ ತಂತ್ರಜ್ಞಾನವಾಗಿದೆ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !