February 25, 2026
Wednesday, February 25, 2026
spot_img

ಹಳ್ಳಿಯಲ್ಲಿ ಜೀವನ ಮಾಡೋಕಾಗಲ್ಲ ಅಂತ ಮನನೊಂದು ಆತ್ಮಹ*ತ್ಯೆ ಮಾಡಿಕೊಂಡ ನವವಿವಾಹಿತೆ!

ಹೊಸದಿಗಂತ ವರದಿ ಕಲಬುರಗಿ:

ಬದುಕಿ ಬಾಳಬೇಕು ಎಂಬ ಆಸೆಯಿಂದ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಯುವತಿ ಕೊರಳಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ನಡೆದಿದೆ.

ಮೃತಳನ್ನು ಅನುಸುಯಾ ಅವಿನಾಶ್ ಆಕಡೆ (26) ಎಂದು ಗುರುತಿಸಲಾಗಿದ್ದು,ಅನುಸುಯಾ ತನ್ನ ಅತ್ತೆ ಮಗ ಅವಿನಾಶ್ ಅವರನ್ನು ಪ್ರೀತಿಸಿ, ಎರಡು ತಿಂಗಳ ಹಿಂದೆ ಎರಡು ಕುಟುಂಬಸ್ಥರ ಸಮ್ಮುಖದಲ್ಲಿ ಸಪ್ತಪದಿ ತುಳಿದು ಮದುವೆಯಾಗಿದ್ದಳು.

ಮದುವೆಯ ನಂತರ ಗಂಡನೊಂದಿಗೆ ಹಳ್ಳಿಯಲ್ಲಿ ವಾಸಿಸುವುದಕ್ಕೆ ಅನುಸುಯಾ ಮನಸ್ಸು ಮಾಡಿಕೊಳ್ಳಲಾಗದೆ ಮಾನಸಿಕವಾಗಿ ನೊಂದಿದ್ದಳು ಎನ್ನಲಾಗಿದೆ. ಅವಳ ಮೂವರು ಸಹೋದರಿಯರು ಗಂಡಂದಿರೊಂದಿಗೆ ಬೆಂಗಳೂರು ಹಾಗೂ ಮುಂಬೈ ಮುಂತಾದ ಮಹಾನಗರಗಳಲ್ಲಿ ವಾಸವಾಗಿದ್ದರೆ, ತಾನು ಚಿಕ್ಕ ಹಳ್ಳಿಯಲ್ಲಿ ಜೀವನ ನಡೆಸಬೇಕಾಗಿರುವುದರಿಂದ ಬೇಸರಗೊಂಡಿದ್ದಳು ಎಂದು ತಿಳಿದುಬಂದಿದೆ.

ಈ ಮಾನಸಿಕ ಒತ್ತಡವೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !