ಮದುವೆ ಮುಗಿಸಿ ಬರುವಾಗ ನವ ದಂಪತಿ ಕಾರು ಅಪಘಾತ: ನಾಲ್ವರು ಸಜೀವ ದಹನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ಮದುವೆ ಮುಗಿಸಿ ಹಿಂತಿರುಗಿ ಬರುತ್ತಿದ್ದ ನವ ದಂಪತಿಗಳ ಕಾರು ಮರಕ್ಕೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಇದರ ಪರಿಣಾಮ ಕಾರಿನಲ್ಲಿದ್ದ ನವ ದಂಪತಿಗಳು ಸೇರಿ ನಾಲ್ವರು ಸಜೀವ ದಹನವಾಗಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದಾರೆ. ಆದರೆ ಅಪಘಾತದ ತೀವ್ರತೆಯಿಂದ ಕಾರಿನಲ್ಲಿದ್ದ ನಾಲ್ವರು ತಕ್ಷಣ ಹೊರಬರಲು ಸಾಧ್ಯವಾಗಿಲ್ಲ. ಇತ್ತ ಬೆಂಕಿ ಜ್ವಾಲೆ ಇಡೀ ಕಾರನ್ನು ಆವರಿಸಿಕೊಂಡಿದೆ. ಇದರ ಪರಿಣಾಮ ನಾಲ್ವರು ಸಜೀವ ದಹನವಾಗಿದ್ದಾರೆ.

ನವದಂಪತಿಗಳು 6 ತಿಂಗಳ ಹಿಂದೆ ಮದುವೆಯಾಗಿದ್ದರು. ನವ ದಂಪತಿಗಳು ಹಾಗೂ ಕುಟುಂಬ ಸದಸ್ಯರು ತಮ್ಮ ಆಪ್ತರ ಮದುವೆಗೆ ತೆರಳಿದ್ದರು. ಮದುವೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಕಾರು ಅಪಘಾತಕ್ಕೀಡಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!