ಕಳ್ಳತನದ ಶಂಕೆಯಿಂದ 9ವರ್ಷದ ಬಾಲಕನಿಗೆ ಹಿಗ್ಗಾಮುಗ್ಗ ಥಳಿತ-ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೈಸಿಕಲ್ ಕದ್ದಿದ್ದಾನೆ ಎಂಬ ಅನುಮಾನದ ಮೇಲೆ ಪೊಲೀಸ್ ಪೇದೆ ಮತ್ತು ಮತ್ತೊಬ್ಬ ವ್ಯಕ್ತಿ ಒಂಭತ್ತು ವರ್ಷದ ಬಾಲಕನನ್ನು ಅಮಾನುಷವಾಗಿ ಥಳಿಸಿರು ಘಟನೆ ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಡೆದಿದೆ. ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಬಾಲಕನನ್ನು ಕಾಲಿನಿಂದು ತುಳಿದಿದ್ದಾರೆ. ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.

ಮತ್ತೊಬ್ಬರು ಬಾಲಕನ ತಲೆಗೂದಲು ಹಿಡಿದು ಮನಬಂದಂತೆ ಥಳಿಸಿದ್ದಾರೆ. ಈ ವೇಳೆ ಸ್ಥಳೀಯ ವ್ಯಕ್ತಿ ಹಾಗೂ ಮಹಿಳೆ ಮಧ್ಯಪ್ರವೇಶಿಸಿ ಬಾಲಕನ ಮೇಲೆ ಹಲ್ಲೆ ನಡೆಸದಂತೆ ತಡೆಯಲು ಯತ್ನಿಸಿದರು. ಆದರೆ ಅವರು ಆ ವ್ಯಕ್ತಿಯನ್ನು ದೂರ ತಳ್ಳಿ ಬಾಲಕನನ್ನು ತೀವ್ರವಾಗಿ ಥಳಿಸಿ ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದಾರೆ.

ಆದರೆ ಈ ಕುರಿತು ರಂಝಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮಕ್ಕಾಗಿ ಕಾನ್‌ಸ್ಟೆಬಲ್‌ಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕನನ್ನು ಅಮಾನುಷವಾಗಿ ಥಳಿಸಿದ ಕಾನ್ ಸ್ಟೇಬಲ್ ವಿರುದ್ಧ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಬಲ್‌ಪುರ ಎಸ್ಎಸ್ಪಿ ಪ್ರದೀಪ್ ಪಾಂಡೆ ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!