ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದಲ್ಲಿ ಚಿರತೆಯೊಂದು ಒಂಬತ್ತು ವರ್ಷದ ಬಾಲಕಿ ಮೇಲೆ ದಾಳಿ ಮಾಡಿ ಕೊಂದಿದೆ.
ನಹ್ಟೌರ್ ಪ್ರದೇಶದ ಬಧಿವೊಲಾ ಗ್ರಾಮದ ಬಳಿ ಬಾಲಕಿ ನಯನಾ ಮೇಲೆ ಚಿರತೆ ದಾಳಿ ಮಾಡಿದೆ, ನೀರಿನ ಬಳಿ ಆಕೆ ಆಟ ಆಡಲು ಹೋದ ವೇಳೆ ಚಿರತೆ ಅಟ್ಯಾಕ್ ಮಾಡಿದೆ. ಆಕೆ ಕೂಗಿದ ತಕ್ಷಣ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ್ದಾರೆ.
ಸದ್ದಿಗೆ ಚಿರತೆ ಓಡಿಹೋಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.