ಹೊಸದಿಗಂತ ಡಿಜಿಟಲ್ ಡೆಸ್ಕ್:
9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವುದು ಶಿವಮೊಗ್ಗ ಜಿಲ್ಲೆಯಿಂದ ವರದಿಯಾಗಿದೆ.
ಬಾಲಕಿ ಹೊಟ್ಟೆ ನೋವು ಎಂದು ಶಾಲೆಗೆ ರಜೆ ಹಾಕಿದ್ದಳು. ರಜೆ ಹಾಕಿದ್ದ ಎರಡು ದಿನದ ಬಳಿಕ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ತಕ್ಷಣವೇ ಆಕೆಯನ್ನ ಕುಟುಂಬಸ್ಥರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. 7 ತಿಂಗಳಿಗೆ ಮಗು ಜನಿಸಿದ್ದು, 1.8 ಕೆಜಿ ತೂಕವಿದ್ದು, ಬಾಲಕಿ ಹಾಗೂ ಮಗು ಆರೋಗ್ಯವಾಗಿದ್ದಾರೆ.
ಘಟನೆ ಬೆಳಕಿಗೆ ಬಂದ ಬೆನ್ನಲ್ಲೆ, ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ ಸಿಬ್ಬಂದಿ ಹಾಗೂ ಪೊಲೀಸರು ದೂರು ದಾಖಲಿಸಿಕೊಂಡು ಬಾಲಕಿಯ ವಿಚಾರಣೆ ನಡೆಸಿದ್ದಾರೆ. ಈ ವೇಳೆ ತನ್ನ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಬಾಲಕಿ ಗೊಂದಲದ ಹೇಳಿಕೆ ನೀಡಿದ್ದಾಳೆ ಎಂದು ತಿಳಿದು ಬಂದಿದೆ. ಇದರಿಂದ ಬಾಲಕಿಯ ಕೌನ್ಸೆಲಿಂಗ್ ನಡೆಸಿದ ಬಳಿಕ ಹೆಚ್ಚಿನ ವಿಚಾರಣೆ ನಡೆಸಲು ನಿರ್ಧಾರಿಸಲಾಗಿದೆ.