ವಿದೇಶ ಸೇರಿದ ಮದ್ಯದ ದೊರೆ ಮಲ್ಯಗೆ ಸ್ವದೇಶದಿಂದ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬ್ಯಾಂಕ್ ಸಾಲ ಮರುಪಾವತಿ ಮಾಡದೆ ವಿದೇಶ ಸೇರಿರುವ ಮದ್ಯದ ದೊರೆ, ಉದ್ಯಮಿ ವಿಜಯ ಮಲ್ಯಗೆ ಮುಂಬೈ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.

2007-2012ರ ಅವಧಿಯಲ್ಲಿ ಮಲ್ಯ, ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಿಂದ 180 ಕೋಟಿ ರೂ. ಸಾಲ ಪಡೆದಿದ್ದರು. ಅದನ್ನು ಮರುಪಾವತಿ ಮಾಡಿರದ ಹಿನ್ನೆಲೆಯಲ್ಲಿ ಮಲ್ಯ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಮಲ್ಯ ಸೇರಿ 10 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮಲ್ಯಗೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಲಾಗಿದ್ದರೆ, ಉಳಿದ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!