ಕೆಂಪಣ್ಣ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಗುತ್ತಿಗೆದಾರ ಕೆಂಪಣ್ಣ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಗುತ್ತಿಗೆದಾರ ಕೆಂಪಣ್ಣ ತೋಟಗಾರಿಕಾ ಸಚಿವ ಮುನಿರತ್ನ ವಿರುದ್ಧ 40% ಲಂಚ ಆರೋಪ ಮಾಡಿದ್ದರು. ಈ ಹಿನ್ನೆಲೆ ಕೆಂಪಣ್ಣ ಹಾಗೂ ಇತರರ ವಿರುದ್ಧ ಸಚಿವ ಮುನಿರತ್ನ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಈ ಪ್ರಕರಣ ಸಂಬಂಧ ಕೆಂಪಣ್ಣ ಹಾಗೂ ಇತರರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಲಾಗಿದೆ.
ಪ್ರಕರಣದ ವಿಚಾರಣೆಯಿಂದ ಗೈರಾದ ಹಿನ್ನೆಲೆಯಲ್ಲಿ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ಕೆಂಪಣ್ಣ ವಿರುದ್ಧ ವಾರೆಂಟ್ ಜಾರಿ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!