ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದು ವರ್ಷದ ಮಗು ತನ್ನ ಮನೆಯ ಟೆರೇಸ್ ಮೇಲೆ ಆಟವಾಡುತ್ತಿದ್ದ ವೇಳೆ ಬಂದ ಮೂರು ಅಡಿ ಉದ್ದದ ಹಾವನ್ನು ಆಟಿಕೆ ಎಂದು ಭಾವಿಸಿ ಅದನ್ನು ಕಚ್ಚಿ ಕೊಂದ ಘಟನೆ ಬಿಹಾರದ ಗಯಾದ ಫತೇಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಜಮುಹರ್ ಗ್ರಾಮದಲ್ಲಿ ನಡೆದಿದೆ.
ಮಗುವಿನ ಕೈಯಲ್ಲಿ ಸತ್ತ ಹಾವನ್ನು ಕಂಡು ಪೋಷಕರು ಬೆಚ್ಚಿಬಿದ್ದಿದ್ದು, ತಕ್ಷಣ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಮಗುವನ್ನು ಪರೀಕ್ಷಿಸಿದ ವೈದ್ಯರು ಆರೋಗ್ಯ ಸ್ಥಿತಿ ಕಂಡು ಅಚ್ಚರಿಗೊಂಡಿದ್ದಾರೆ.
ಆಸ್ಪತ್ರೆಯ ಅಧಿಕಾರಿಗಳು ಮಗುವಿಗೆ ಎಲ್ಲಾ ರೀತಿಯ ಪರೀಕ್ಷೆಗಳನ್ನು ಮಾಡಿ ಮಗು ಸಂಪೂರ್ಣವಾಗಿ ಆರೋಗ್ಯವಾಗಿದ್ದು, ಯಾವುದೇ ಅಪಾಯವಾಗಿಲ್ಲ ಎಂದು ತಿಳಿದುಬಂದಿದೆ. ಮಗು ಕಚ್ಚಿದ ಕಾರಣ ಹಾವು ಸಾವನ್ನಪ್ಪಿದೆ. ಮಳೆಗಾಲದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಈ ಹಾವು ವಿಷಕಾರಿಯಲ್ಲ, ಆದ್ದರಿಂದ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ.